ಬಾರ್ಕೂರು ಶ್ರೀ ಏಕನಾಥೇಶ್ವರೀ ದೇವಸ್ಥಾನ ಟ್ರಸ್ಟ್‌, ಸಂಸ್ಥೆಗಳು ಮತ್ತು ದಾನಿಗಳ ಸಂಯುಕ್ತ ಆಶ್ರಯದಲ್ಲಿ ಪ್ರತಿಭಾ ಪುರಸ್ಕಾರ -2019

ಬ್ರಹ್ಮಾವರ, ಜೂ.20: ಬಾರ್ಕೂರು ಶ್ರೀ ಏಕನಾಥೇಶ್ವರೀ ದೇವಸ್ಥಾನ ಟ್ರಸ್ಟ್‌, ದೇವಾಡಿಗ ಸಮಾಜದ ಪ್ರತಿಷ್ಠಿತ ಸಂಸ್ಥೆಗಳು ಮತ್ತು ದಾನಿಗಳ ಸಂಯುಕ್ತ ಆಶ್ರಯದಲ್ಲಿ 2018-19ರ ಶೈಕ್ಷಣಿಕ ವರ್ಷದಲ್ಲಿ ದೇಶದ ವಿವಿಧ ಪ್ರಾಂತ್ಯದಲ್ಲಿ ಎಸ್‌.ಎಸ್‌.ಎಲ್.ಸಿ. ಮತ್ತು ಪಿ.ಯು.ಸಿ./ಎಚ್.ಎಸ್‌.ಸಿ. ಪರೀಕ್ಷೆಗಳಲ್ಲಿ ಶೇ.80 ಹಾಗೂ ಅದಕ್ಕಿಂತ ಅಧಿಕ ಅಂಕ ಗಳಿಸಿದ ದೇವಾಡಿಗ ಸಮಾಜದ ಪ್ರತಿಭಾವಂತ ವಿದ್ಯಾರ್ಥಿ/ವಿದ್ಯಾರ್ಥಿನಿಯರನ್ನು ಪುರಸ್ಕಾರದೊಂದಿಗೆ ಗೌರವಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ.

 


Share